ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದೆ. ರಾಜ್ಯದಲ್ಲಿ ಮೊದಲಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ರಾಜಕೀಯ ಪಕ್ಷಗಳು ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿವೆ.
ಈ ಬಾರಿಯ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲುವುದಾಗಿ ಬಿಜೆಪಿ-ಜೆಡಿಎಸ್ ನಾಯಕರು ಹೇಳಿಕೊಂಡಿದ್ದಾರೆ. ಸೀಟು ಹೊಂದಾಣಿಕೆ ಮಾಡಿಕೊಂಡಿರುವ ಈ ನಾಯಕರು ಕಳೆದ ಬಾರಿ ತಮ್ಮ ಪಕ್ಷ ಗೆದ್ದಿರುವ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಹರಸಾಹಸ ನಡೆಸುತ್ತಿವೆ.
ಇನ್ನೊಂದೆಡೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಪಕ್ಷ ಈ ಬಾರಿ ಬಿಜೆಪಿಯನ್ನು ಕಟ್ಟಿಹಾಕಲು ರಣತಂತ್ರ ರೂಪಿಸಿದೆ. ಈ ನಡುವೆ ರಾಜ್ಯದಲ್ಲಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಯ ಪ್ರಚಾರದ ಬಿಡುವಿನಲ್ಲಿ ಚುನಾವಣಾ ಪ್ರಚಾರದ ವೇಳೆಯ ಜನಾಭಿಪ್ರಾಯ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿ-ಗತಿಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ @DKShivakumar ಹಾಗೂ ಮುಖ್ಯಮಂತ್ರಿ @siddaramaiah ಅವರ ಮಾತುಕತೆ. pic.twitter.com/AHnmUtu5Nd
— Karnataka Congress (@INCKarnataka) April 19, 2024
ಚುನಾವಣೆಯ ಪ್ರಚಾರದ ಬಿಡುವಿನಲ್ಲಿ ಜನಾಭಿಪ್ರಾಯ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿ-ಗತಿಗಳ ಬಗ್ಗೆ ಈ ಇಬ್ಬರು ನಡೆಸಿರುವ ಮಾತುಕತೆಯ ವೀಡಿಯೊಂದನ್ನು ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಈ ನಾಯಕರು ಕಾಂಗ್ರೆಸ್ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ 20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಈ ನಾಯಕರು ವಿಶ್ಲೇಷಿಸಿದ್ದಾರೆ.



















































