ಧಾರವಾಡ: ಕಾಲೇಜು ವಿದ್ಯಾರ್ಥಿನಿ ನೇಹಾಳ ಬರ್ಬರ ಹತ್ಯೆ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕೃತ್ಯವನ್ನು ವಯ್ಯಕ್ತಿಕ ಕಾರಣಕ್ಕಾಗಿ ನಡೆದ ಕೃತ್ಯ ಎಂದು ಕಾಂಗ್ರೆಸ್ ನಾಯಕರು ಹೇಳಿದರೆ, ಇದು ಲವ್ ಜಿಹಾದಿ ಕೃತ್ಯ ಎಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಆರೋಪಿಸಿವೆ.
ಈ ನಡುವೆ ಕೆಲವರು ನೇಹಾ ಹತ್ಯೆಯನ್ನು ಸಮರ್ಥಿಸಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಯುವಕರಿಬ್ಬರನ್ನು ದಾವಣಗೆರೆಯ ವಿದ್ಯಾಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಯುವಕರು ಸಾಮಾಜಿಕ ಜಾಲತಾಣದಲ್ಲಿ ನೇಹಾ, ಫಯಾಜ್ ಫೋಟೋ ಬಳಸಿ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಲಾಗಿದೆ.