ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತದಾನದ ನಂತರ ನಿಧನರಾಗಿದ್ದಾರೆ. ಅವರು ಹೃದಯಾಘಾತದಿಂದ ನಿಧನರಾದರು ಎಂದು ಸಂಬಂಧಿಕರು ತಿಳಿಸಿದ್ದಾರೆ.
ಮೊರಾದಾಬಾದ್ನಲ್ಲಿ ಶುಕ್ರವಾರ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ಅವರು ಏಪ್ರಿಲ್ 19 ರಂದು ಅವರು ತಮ್ಮ ಹುಟ್ಟೂರಾದ ರತುಪುರ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮರುದಿನ ಬೆಳಗ್ಗೆ ಅವರನ್ನು ಚಿಕಿತ್ಸೆಗಾಗಿ ಏಮ್ಸ್ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ಸಂಬಂಧಿಕರು ತಿಳಿಸಿದ್ದಾರೆ.
72 ವರ್ಷದ ಸರ್ವೇಶ್ ಸಿಂಗ್ ಅವರು ಮಾರ್ಚ್ ತಿಂಗಳಲ್ಲಿ ಹಲ್ಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಅಸ್ವಸ್ಥರಾಗಿದ್ದರು. ಠಾಕುರ್ದ್ವಾರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಸರ್ವೇಶ್ ಸಿಂಗ್ ಅವರು ಈ ಬಾರಿ ಮೊರಾದಾಬಾದ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.