ಶಿವಮೊಗ್ಗ: ಕರಾವಳಿ- ಮಲೆನಾಡಿನ ಪ್ರದೇಶಗಳನ್ನು ಹೊಂದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರ ಇದೀಗ ಕುತೂಹಲದ ಕೇಂದ್ರಬಿಂದುವಾಗಿದೆ. ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವಕುಮಾರ್ ಅಖಾಡದಲ್ಲಿದ್ದಾರೆ. ಇದೇ ವೇಳೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿಗ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿದಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಇದೀಗ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ. ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜವಾದಿ ಪಾರ್ಟಿಯ ಎ.ಡಿ. ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್ ಕಣದಲ್ಲಿದ್ದಾರೆ.
ಈ ಕ್ಷೇತ್ರದಲ್ಲಿ ಅಂತಿಮವಾಗಿ 23 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
























































