ನವದೆಹಲಿ: ಕಾಂಗ್ರೆಸ್ ವಿರುದ್ದ ‘ಸಂಪತ್ತು ಮರುಹಂಚಿಕೆ’ಯ ಟೀಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್ ಪಕ್ಷ ದೂರು ನೀಡಿದೆ
ಮೋದಿಯವರ ಹೇಳಿಕೆ ದುರುದ್ದೇಶದಿಂದ ಕೂಡಿದ್ದು, ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿದೆ. ಈ ಮೂಲಕ ಚುನಾವಣ ನೀತಿ ಸಂಹಿತೆಯನ್ನು ಮೋದಿಯವರು ಉಲ್ಲಂಸಿದ್ದಾರೆ ಎಂದು ದೂರಿನಲ್ಲಿ ಕಾಂಗ್ರೆಸ್ ಆರೋಪಿಸಿದೆ.
‘ಸಂಪತ್ತು ಮರುಹಂಚಿಕೆ’ ಹೇಳಿಕೆಗೆ ಸಂಬಂಧಿಸಿ ಮೋದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗವನ್ನು ಕಾಂಗ್ರೆಸ್ ಆಗ್ರಹಿಸಿದೆ.







































































