ಬೆಂಗಳೂರು: ಬರಪರಿಹಾರ ವಿಚಾರದಲ್ಲಿ ಕೇಂದ್ರದ ವಿರುದ್ದ ವಿಧಾನಸೌಧ ಬಳಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವಿವಾದಕ್ಕೀಡಾಗಿದೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡದ ಪ್ರತಿಭಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪ್ರತಿಭಟಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬರ ಪರಿಹಾರದ ವಿಚಾರ ಮಂದಿಟ್ಟುಕೊಂಡು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರಿಗೆ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಾಗೂ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ನಿಯೋಗವು… pic.twitter.com/fJ009UKcpy
— BJP Karnataka (@BJP4Karnataka) April 23, 2024
ಇದೇ ವೇಳೆ, ವಿಧಾನಸೌಧದ ಒಳಗೆ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈಗ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ನಾಯಕರು ಪ್ರತಿಭಟಿಸಲು ಅವಕಾಶ ಕೊಟ್ಟ ಮುಖ್ಯ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರ ನೀಡಲಾಗಿದೆ. ವಿಧಾನಸೌಧವನ್ನು ಈಗಾಗಲೇ ಮೂರು ನಾಲ್ಕು ಬಾರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದರು.


























































