ಬೆಂಗಳೂರು: ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಅಖಾಡವಾಗಿದ್ದು ಭರ್ಜರಿ ಸೇಸಾತ ನಡೆದಿದೆ. ಇದೇ ವೇಳೆ, ಮಾಜಿ ಸಚಿವ, ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ.
ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ಸಿಕ್ಕಿರುವ ವಿದ್ಯಮಾನದಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.
‘ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ಪೊಲೀಸರು 4.8 ಕೋಟಿ ಮೌಲ್ಯದ ನಗದು ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಎಸ್‌ಎಸ್‌ಟಿ ತಂಡವು ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ 25.04.2024 ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ’ ಎಂದು ಚುಂನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ.
The FST of Chikkaballapura seized cash worth 4.8 Crores. An FIR also has been lodged by the SST team of Chikkaballapura Constituency against K Sudhakar, BJP Candidate on 25.04.2024 at Madanayakanahally Police Station.
— Chief Electoral Officer, Karnataka (@ceo_karnataka) April 26, 2024