ಬೆಂಗಳೂರು: ಅಷ್ಲೀಲಾ ವೀಡಿಯೋ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿರುವ ಸರ್ಕಾರ ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಕ್ರಮ ಕೈಗೊಂಡಿದೆ. ಸಿಎಂ ಅವರ ಕ್ರಮವನ್ನು ಸ್ವಾಗತಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ದೂರಿನ ಸುಳಿವು ಸಿಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಗೇಲಿ ಮಾಡಿದೆ. ಬೇಟಿ ಬಚಾವೋ ಎನ್ನುವ ಮೋದಿಯವರು ತಮ್ಮ ಮೌನದ ಮೂಲಕ ಮಹಿಳಾ ಪೀಡಕರನ್ನು ಪ್ರೋತ್ಸಾಹಿಸುತ್ತಿದ್ದಾರೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಎಸ್ ಐ ಟಿ ತನಿಖೆ ನಡೆಸುವಂತೆ ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅಭಿಪ್ರಾಯ ಹಂಚಿಕೊಂಡಿದೆ.
ಈ ಮಧ್ಯೆ ಮಹಿಳಾ ಆಯೋಗ ದೂರು ನೀಡುವ ಸುಳಿವು ಸಿಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಈ ಪಲಾಯನವೇ ಪ್ರಕರಣದ ತೀವ್ರತೆಯನ್ನು ಸಾರುತ್ತಿದೆ, ದೇಶದಲ್ಲೇ ಇದೊಂದು ಕಂಡು ಕೇಳರಿಯದ ದೊಡ್ಡ ಹಗರಣವಾಗಿರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಹೇಳಿದೆ.
ಬೇಟಿ ಬಚಾವೋ ಎನ್ನುವ ಮೋದಿಯವರು ತಮ್ಮ ಮೌನದ ಮೂಲಕ ಮಹಿಳಾ ಪೀಡಕರನ್ನು ಪ್ರೋತ್ಸಾಹಿಸುತ್ತಿದ್ದಾರೆಯೇ? ಬಿಜೆಪಿ ತನ್ನ ಮಿತ್ರರ ಈ ಕರ್ಮಕಾಂಡದ ಬಗ್ಗೆ ತುಟಿ ಬಿಚ್ಚುತ್ತಿಲ್ಲವೇಕೆ? ಸಾವಿರಾರು ಮಹಿಳೆಯರ ಮಾನ ಬೀದಿ ಪಾಲಾಗುತ್ತಿದ್ದರೂ ಮೋದಿ ಹಾಗೂ ಬಿಜೆಪಿಗೆ ಮನ ಕಲುಕುತ್ತಿಲ್ಲವೇ? ಮಹಿಳೆಯರ ಘನತೆಗಿಂತ ಬಿಜೆಪಿಗೆ ತಮ್ಮ ರಾಜಕೀಯ ಹೊಂದಾಣಿಕೆಯೇ ಮುಖ್ಯವಾಯ್ತೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಎಸ್ ಐ ಟಿ ತನಿಖೆ ನಡೆಸುವಂತೆ ಪತ್ರ ಬರೆದ ಹಿನ್ನೆಲೆಯಲ್ಲಿ
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು…
— Karnataka Congress (@INCKarnataka) April 27, 2024