ಬೆಂಗಳೂರು, ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ನಿಂದ ಉಚ್ಚಾಟಿಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡುವ ನಿರ್ಧಾರದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರಜ್ವಲ್ ವಿರುದ್ದದ ಕ್ರಮದ ಬಗ್ಗೆ ತಿಳಿಸಿದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹೇಳುತ್ತಿದ್ದೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಪ್ರತಿಪಾದಿಸಿದ ಕುಮಾರಸ್ವಾಮಿ, ಪ್ರಜ್ವಲ್ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ರೀತಿ ಸಂಬಂಧ ಇಲ್ಲ. ನಮ್ಮ ಪಕ್ಷದ ನಾಯಕರಿಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.