ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ನೋಯ್ಡಾ ಸಹಿತ ಸುತ್ತಮುತ್ತಲ 100ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಗಲಿಬಿಲಿಗೊಂಡಿದ್ದಾರೆ.
ದೆಹಲಿ-ಎನ್‌ಸಿಆರ್ ಸೇರಿದಂತೆ ಸುಮಾರು 100 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಒಂದೇ ಇಮೇಲ್‌ನಿಂದ ಈ ಸಂದೇಶ ರವಾನೆಯಾಗಿರುವುದನ್ನು ಪೊಲೀಸರು ಪತ್ತೆಮಾಡಿದ್ದಾರೆ.
ಈ ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಗ್ರಹ ತಂಡ ಹಾಗೂ ಅಗ್ನಿ ಶಾಮಕ ದಳ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿವೆ. ಆದರೆ ಯಾವುದೇ ಸ್ಥಳದಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಸುರಕ್ಷಾ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.