ಬೆಂಗಳೂರು: ಪೆನ್ ಡ್ರೈವ್ ಕೇಸ್ ಬಗ್ಗೆ ಎಸ್ಐಟಿ ತನಿಖೆ ಬಿರುಸುಗೊಂಡಿದ್ದು, ಅಶ್ಲೀಲ ವೀಡಿಯೋ ಸಂತ್ರಸ್ತರ ಬಗ್ಗೆ ಪೊಲೀಸರು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸುವಲ್ಲಿ ಗಮನ ಕೇಂದ್ರೀಕರಿಸಿದ್ದಾರೆ. ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೊಟೀಸ್ಗೆ ತೀರ್ಮಾನಿಸಿರುವ ನಡೆ ಕುತೂಹಲ ಕೆರಳಿಸಿದೆ..
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಈ ಸಂಬಂಧ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ಸಂಬಂಧ ಹಾಜರಾಗುವಂತೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಲಾಗಿತ್ತು. ಮಂಗಳವಾರ ವಿಚಾರಣೆಗೆ ಹಾಜರಾಗಬೇಕಾಗಿತ್ತು. ಆದರೆ ಇಬ್ಬರೂ ವಿಚಾರಣೆಯಿಂದ ದೂರ ಉಳಿದಿದ್ದರು. ಈ ಬೆಳವಣಿಗೆಯ ನಡುವೆ ಎಸ್ಐಟಿ ಮುಂದಿನ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.