ಕಲಬುರಗಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಅವರು ವಿಧಿವಶರಾಗಿದ್ದಾರೆ. ಶಿಕ್ಷಣ ತಜ್ಞರೂ ಆದ 79 ವರ್ಷ ಹರೆಯದ ಡಾ.ನಾಗರೆಡ್ಡಿ ಪಾಟೀಲ್ ಅವರು ಸೋಮವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೊಳಗಾದರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಡಾ.ನಾಗರೆಡ್ಡಿ ಪಾಟೀಲ್ ಅವರು 1983 ರಿಂದ 85 ರ ಅವಧಿಯಲ್ಲಿ ಅವರು ಶಾಸಕರಾಗಿದ್ದರು. ಡಾ.ನಾಗರೆಡ್ಡಿ ಪಾಟೀಲ್ ಅವರ ನಿಧಾನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.