ನವದೆಹಲಿ; ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
So a GODI media asked @narendramodi about Prajwal Revanna & Modiji called for harshest punishment against him.
Now I challenge every Presstitutes to question Mamata Banerjee on Shahjahan Sheikh & Rahul Gandhi on why Karnataka govt let Prajwal Revanna roam freely if they had… pic.twitter.com/GYjsvMoY3d
— BALA (@erbmjha) May 6, 2024
ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿಯವರು ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ಪ್ರಧಾನಿಯವರ ಮೌನ ಬಗ್ಗೆ ಪ್ರತಿಪಕ್ಷಗಳು ಪ್ರಶ್ನಿಸುತ್ತಿದ್ದಂತೆಯೇ ಮೋದಿಯವರು ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಆದರೆ ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ ಎಂದು ಮೋದಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದವರು ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಅವಧಿಯದ್ದಾಗಿದೆ. ಒಕ್ಕಲಿಗ ಪ್ರಬಲ್ಯದ ಕ್ಷೇತ್ರಗಳಲ್ಲಿನ ಮತದಾನ ಮುಗಿದ ಬಳಿಕ ಈ ವೀಡಿಯೋಗಳನ್ನು ಬಹಿರಂಗ ಮಾಡಲಾಗಿದೆ ಎಂದು ಮೋದಿಯವರು ಕಾಂಗ್ರೆಸ್ ಸರ್ಕಾರದ ನಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.