ನವದೆಹಲಿ: ಲೋಕಸಭಾ ಚುನಾವಣೆ ಇದೀಗ ನಿರ್ಣಾಯಕ ಹಂತದಲ್ಲಿದ್ದು ಮೂರನೇ ಹಂತದ ಮತದಾನ ಗಮಸೆಳೆದಿದೆ.
11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ಇಂದು ನಿರ್ಧಾರವಾಗಲಿದೆ.























































