ಬೆಂಗಳೂರು : 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಗುರಿವಾರ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದು ಅನಂತರ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪಗರಕಟವಾಗಲಿದೆ.
.ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.
8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ:
ದಿನಾಂಕ 25.03.2024 ರಿಂದ 06.04.2024 ರವರೆಗೆ ನಡೆದ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-1 ಬರೆದಿದ್ದಾರೆ. ಇವರಲ್ಲಿ 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.