ಚಿತ್ರದುರ್ಗ:; ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸದ್ದೆಬ್ಬಿಸಿರುವ ಬಿಜೆಪಿ ನಾಯಕ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೆನ್ ಡ್ರೈವ್ ಬಿಡುಗಡೆ ಮಾಡಿದ ಆರೋಪಕ್ಕೆ ಗುರಿಯಾಗಿರುವ ದೇವರಾಜೆಗೌಡ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವಕೀಲರೂ ಆಗಿರುವ ದೇವರಾಜೇಗೌಡರನ್ನು ಚಿತ್ರದುರ್ಗ ಜಿಲ್ಲೆಯ ಗುಹಿಲಾಳ್ ಟೋಲ್ ಬಳಿ ಹಿರಿಯೂರು ಪೊಲೀಸರು ವಶಕ್ಕೆ ಪಡೆದು ಹಾಸನ ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇವರಾಜೇಗೌಡರ ಬಂಧನಕ್ಕೆ ಬಲೆ ಬೀಸಿದ್ದ ಹಾಸನ ಪೊಲೀಸರು, ಚಿತ್ರದುರ್ಗ .ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರೆನ್ನಲಾಗಿದೆ. ಈ ಮಾಹಿತಿ ಆಧರಿಸಿ ಹಿರಿಯೂರು ಬಳಿ ದೇವಾರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಹಾಸನ ಪೊಲೀಸರಿಗೆ ಒಪ್ಪಿಸಿದ್ದಾರೆ.


























































