ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಸಡಿಲಿಸಲು ಕೋರಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮುಖ್ಯ ಚುನಾವಣಾಧಿಕಾರಿ (ಸಿಇಒ) ಮನೋಜ್ ಕುಮಾರ್ ಮೀನಾ ಅವರಿಗೆ ಮನವಿ ಮಾಡದ್ದಾರೆ.
ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಬರ ಪರಿಸ್ಥಿತಿ ಸಹಿತ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಸಂಬಂಧ ಈ ಸಡಿಲಿಕೆಗೆ ಮನವಿ ಮಾಡಿದ್ದಾರೆ.
ಸರ್ಜಾರದ ಮುಖ್ಯ ಕಾರ್ಯದರ್ಶಿಗಳ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕೇಂದ್ರ ಚುನಾವಣ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.







































































