ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಬೇಸಿಗೆಯ ಬೇಗೆಯಿಂದ ಬೆಂದಿರುವ ಜನರಿಗೆ ತಂಪಾಗಿದ್ದಾರೆ. ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಅತಿ ಹೆಚ್ಚು ಮಳೆಯಾಗಲಿದ್ದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

























































