ಬೆಂಗಳೂರು: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದ್ದು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ವಿಧಾನಪರಿಷತ್ತಿನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿರುವ ಬಿಜೆಪಿ, ಇನ್ನುಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಯಾದಿ ಪ್ರಕಟಿಸಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.
ಮೇಲ್ಮನೆ ಅಭ್ಯರ್ಥಿಗಳ ಪಟ್ಟಿ ಹೀಗಿದೆ:
- ಈಶಾನ್ಯ ಪದವೀಧರ ಕ್ಷೇತ್ರ: ಅಮರನಾಥ್ ಪಾಟೀಲ್,
- ನೈಋತ್ಯ ಪದವೀಧರ ಕ್ಷೇತ್ರ: ಡಾ.ಧನಂಜಯ ಸರ್ಜಿ,
- ಬೆಂಗಳೂರು ಪದವೀಧರ ಕ್ಷೇತ್ರ: ಅ.ದೇವೇಗೌಡ,
- ಆಗ್ನೇಯ ಶಿಕ್ಷಕರ ಕ್ಷೇತ್ರ: ವೈ.ಎ.ನಾರಾಯಣಸ್ವಾಮಿ,
- ದಕ್ಷಿಣ ಶಿಕ್ಷಕರ ಕ್ಷೇತ್ರ: ಇ.ಸಿ.ನಿಂಗರಾಜು.

























































