ನವದೆಹಲಿ: ಕೇಂದ್ರೀಯ ಶಾಲಾ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ 12 ನೇ ತರಗತಿ ಪರೀಕ್ಷೆಯಲ್ಲಿ ಶೇ 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. cbse.gov.in ನಲ್ಲಿ ಫಲಿತಾಂಶ ಲಭ್ಯವಿದೆ ಎಂದು ಇಲಾಖೆ ತಿಳಿಸಿದೆ.
ಈ ವರ್ಷ ಒಟ್ಟು 16,21,224 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಫಲಿತಾಂಶ ಫೈಕಿ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಶೇ 91 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 95 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 1.16 ಲಕ್ಷ ವಿದ್ಯಾರ್ಥಿಗಳು ಶೇ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.