ಬೆಂಗಳೂರು: ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಕಳೆದ ವಾರ ಎಸ್ಐಟಿ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿತ್ತು.
ನ್ಯಾಯಾಲಯದ ಆದೇಶ ಹೊರಬೀಳುವ ಹೊತ್ತಿಗೆ ಸಂಜೆಯಾಗಿದ್ದರಿಂದ ಮುಂದಿನಪ್ರಕ್ರಿಯೆ ನಡೆಯಲು ಕಾಲಾವಕಾಶ ಇರಲಿಲ್ಲ. ಹಾಗಾಗಿ ಇಂದು ಕಾನೂನಾತ್ಮಕ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗೆಚ್.ಡಿ.ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.