ವಾರಣಾಸಿ: ಲೋಕಸಭಾ ಚುನಾವಣೆಗಳಲ್ಲಿ ಸತತ ಮೂರನೇ ಬಾರಿಯ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಸಮರದ ಅಖಾಡಕ್ಕೆ ಅಧಿಕೃತವಾಗಿ ಧುಮಿಕಿದ್ದಾರೆ. ಪ್ರಸಕ್ತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
Live : ವಾರಣಾಸಿಯಲ್ಲಿ ಪ್ರಧಾನಿ ಶ್ರೀ @narendramodi ಅವರಿಂದ ನಾಮಪತ್ರ ಸಲ್ಲಿಕೆ #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ https://t.co/JAr0oL0DC4
— BJP Karnataka (@BJP4Karnataka) May 14, 2024
ನಾಮಪತ್ರಕ್ಕೂ ಮುನ್ನ ಮೋದಿ ಅವರು ಮಂಗಳವಾರ ಬೆಳಿಗ್ಗೆ ಗಂಗಾದಲ್ಲಿ ಸ್ನಾನ ಮಾಡಿ, ದಶಾಶ್ವಮೇಧ ಘಾಟ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕಾಶಿಯ ಕೊತ್ವಾಲ್ ಕಾಲಭೈರವನ ದರ್ಶನ ಪಡೆದರು. ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಸಿದ್ಧಿ ಯೋಗದ ಜೊತೆಗೆ ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದೆ ಎನ್ನಲಾಗಿದೆ. ಈ ಸಮಯದಲ್ಲೇ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸಿದರು.
ಪ್ರಧಾನಿ ಶ್ರೀ @narendramodi ಅವರು ಇಂದು ವಾರಣಾಸಿಯ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. pic.twitter.com/VP5K6yG59R
— BJP Karnataka (@BJP4Karnataka) May 14, 2024
ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದು ಈ ಬಾರಿಯ ಲೋಕಸಭಾ ಚುನಾವಣೆಯ ಅಂತಿಮ ಹಂತದ (ಏಳನೇ ಹಂತದ) ಮತದಾನ ನಡೆಯುವ ಕ್ಷೇತ್ರಗಳ ಪಟ್ಟಿಯಲ್ಲಿದೆ.