ಬೆಂಗಳೂರು: ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ ಎಂದು ಕೇಂದ್ರ ಸರ್ಕಾರವನ್ನು ಪ್ರದೇಶ ಕಾಂಗ್ರೆಸ್ ಪಕ್ಷ ಕುಟುಕಿದೆ.
18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ ಎಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ ಎಂದು ಗಮನಸೆಳೆದಿದೆ.
ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ.
18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ.
ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ… pic.twitter.com/N15Cc4FaDb
— Karnataka Congress (@INCKarnataka) May 14, 2024
ಅಕ್ಕಿ ರಾಜಕೀಯ ಮಾಡಿದ ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿರುವ ಕಾಂಗ್ರೆಸ್, 24 ರೂಪಾಯಿಯ ಭಾರತ್ ಅಕ್ಕಿ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿಯಿತೇ? ಖಾಸಗಿ ಕಂಪೆನಿಗಳೂ ಸಹ ಕೇಂದ್ರ ಆಹಾರ ನಿಗಮದ ಅಕ್ಕಿಯನ್ನು ಖರೀದಿಸಲು ಮುಂದಾಗಲಿಲ್ಲವೇ? ಖಾಲಿ ಮಾಡಲಾಗದಷ್ಟು ಅಕ್ಕಿ ಇದ್ದರೂ ಕನ್ನಡಿಗರಿಗೆ ವಂಚಿಸಿದ್ದೇಕೆ? ನಮ್ಮ ಸರ್ಕಾರ ಕೆಜಿಗೆ ₹34 ಕೊಟ್ಟು ಖರೀದಿಸಿದ್ದಿದ್ದರೆ ಆಹಾರ ನಿಗಮಕ್ಕೆ ಲಾಭವಾಗುತ್ತಿತ್ತು, ಆ ಲಾಭವನ್ನು ತಪ್ಪಿಸಿ ನಷ್ಟಕ್ಕೆ ತಳ್ಳಿದ್ದೇಕೆ? ಎಂದು ಕೇಳಿದೆ.
ಕನ್ನಡಿಗರಿಗೆ ಅಕ್ಕಿ ನೀಡದೆ ದ್ರೋಹ ಮಾಡಿದಿರಲ್ಲ, ಕನ್ನಡಿಗರು ನಿಮಗೆ ಯಾವ ಜನ್ಮದ ಶತ್ರುಗಳು? ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.