ಕೋಲ್ಕತ್ತಾ: ಲೋಕಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಬಿಜೆಪಿ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದ್ದರೆ, ‘ಇಂಡಿಯಾ’ ಮೈತ್ರಿಕೂಟ ಗೆಲುವಿನ ಲೆಕ್ಕಾಚಾರದಲ್ಲಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದ್ದು, ಈವರೆಗೆ ನಾಲ್ಕು ಹಂತಗಳ ಮತದಾನ ನಡೆದಿರುವ ಕ್ಷೇತ್ರಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.
4 चरण की 380 सीटों के चुनाव पूरा होने के साथ ही मोदी जी 270 सीट लेकर पूर्ण बहुमत प्राप्त कर चुके हैं।
Modi Ji has attained a majority with 270 seats, after the completion of voting in 380 seats of the first 4 phases. pic.twitter.com/bPc5GKEWsp
— Amit Shah (Modi Ka Parivar) (@AmitShah) May 14, 2024
ಪಶ್ಚಿಮ ಬಂಗಾಳದ ಬಂಗಾವ್‌ನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅಮಿತ್ ಶಾ, ಈಗಾಗಲೇ ನಾಲ್ಕು ಹಂತಗಳ ಮತದಾನ ಪೂರ್ಣಗೊಂಡಿದ್ದು ಮತದಾನ ನಡೆದಿರುವ 380 ಸ್ಥಾನಗಳಲ್ಲಿ ಮೋದಿ ಈಗಾಗಲೇ 270 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ, ಸಿಎಎ ಜಾರಿಯಿಂದ ಯಾರಿಗೂ ತೊಂದರೆ ಆಗಲ್ಲ ಎಂದು ಪ್ರತಿಪಾದಿಸಿದ ಅವರು, ಸಿಎಎ ಜಾರಿಯಿಂದ ದೇಶದಲ್ಲಿ ಗೌರವದಿಂದ ಬದುಕಲು ಸಾಧ್ಯ ಎಂದರು.