ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ವಿಧಾನ ಪರಿಷತ್ ಸಮರ ಆರಂಭವಾಗಿದೆ. ಆಡಳಿತಾರೂಢ ಕಾಂಗ್ರೆಸ್ ರಣತಂತ್ರ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಗಮನಸೆಳೆದಿದೆ.
ಈ ನಡುವೆ ಮತದಾರರಿಗೆ ಹಂಚಲು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾದ ಭಾರೀ ಪ್ರಮಾಣದ ಉಡುಗೊರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ, ‘ಕನ್ನಡಿಗರ ತೆರಿಗೆಯನ್ನು ಲೂಟಿ ಹೊಡೆದ ಎಟಿಎಂ ಸರ್ಕಾರ, ಅದನ್ನು ಚುನಾವಣೆಗಳಲ್ಲಿ ಅಕ್ರಮವಾಗಿ ಹಂಚಲು ಹೋಗಿ ಸಿಕ್ಕಿಬಿದ್ದಿದೆ’ ಎಂದು ಲೇವಡಿ ಮಾಡಿದೆ.
ಕನ್ನಡಿಗರ ತೆರಿಗೆಯನ್ನು ಲೂಟಿ ಹೊಡೆದ #ATMSarkara ಅದನ್ನು ಚುನಾವಣೆಗಳಲ್ಲಿ ಅಕ್ರಮವಾಗಿ ಹಂಚಲು ಹೋಗಿ ಸಿಕ್ಕಿಬಿದ್ದಿದೆ.@INCKarnataka ದ ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿ ಗೌಡ ಅವರು ಸುಮಾರು 20 ಸಾವಿರಕ್ಕೂ ಅಧಿಕ ಉಡುಗೊರೆಗಳನ್ನು ಕೊರಿಯರ್ ಮೂಲಕ ಕಳಿಸಲು ಸಂಚು ರೂಪಿಸಿದ್ದರು.
ವಿದ್ಯಾವಂತ ಪದವೀಧರರಿಗೆ ಆಮಿಷ ಒಡ್ಡಿ… pic.twitter.com/MRr5JKywOu
— BJP Karnataka (@BJP4Karnataka) May 16, 2024
ಕಾಂಗ್ರೆಸ್ ಪಕ್ಷದ ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿ ಗೌಡ ಅವರು 20 ಸಾವಿರಕ್ಕೂ ಹೆಚ್ಚು ಉಡುಗೊರೆಗಳನ್ನು ಕೊರಿಯರ್ ಮೂಲಕ ಕಳಿಸಲು ಸಂಚು ರೂಪಿಸಿದ್ದರು. ವಿದ್ಯಾವಂತ ಪದವೀಧರರಿಗೆ ಆಮಿಷ ಒಡ್ಡಿ ಮತ ಕೇಳುವಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ ಎಂದು ಟೀಕಿಸಿರುವ ಬಿಜೆಪಿ, ಕೂಡಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾ ಆಯೋಗ ಅಸಿಂಧುಗೊಳಿಸಬೇಕಿದೆ ಎಂದು ಪ್ರತಿಪಾದಿಸಿದೆ.





















































