ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಬಂಧಿತನಾಗಿ, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಅವರ ಮೇಲು ಸಹ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ದೇವರಾಜೇಗೌಡ ಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ ಎಂದು ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ.
ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ…
— N Chaluvarayaswamy (@Chaluvarayaswam) May 18, 2024
ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನ ನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್.ಐ.ಟಿ ತನಿಖೆ ನಡೆಸುತ್ತಿದ್ದು ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಎಂದು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.


























































