ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು ಬೇಸಿಗೆಯ ಬೇಗೆಯಲ್ಲಿ ಬೆಂದಿದ್ದ ಜನರು ಸಂತಸಗೊಂಡಿದ್ದಾರೆ. ಇನ್ನೂ ಒಂದುವಾರ ಕಾಲ ಇದೇ ರೀತಿ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಾಗಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಗಳಿವೆ.
ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.







































































