ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತೆನ್ನಲಾದ ಅಡ್ಡೆಗೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ಒಂದರಲ್ಲಿ ರೇವ್ ಪಾರ್ಟಿ ನಡೆಯುತ್ತದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದರು. ಸ್ಥಳಕ್ಕೆ ಲಗ್ಗೆ ಹಾಕಿದ ಸಂದರ್ಭದಲ್ಲಿ ತೆಲುಗಿನ ನಟಿಯರು ಹಾಗೂ ಮಾಡೆಲ್‌ಗಳು ಸೇರಿದಂತೆ ಪ್ರತಿಷ್ಠಿತರೆನಿಸಿದ ಅನೇಕರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದರೆನ್ನಲಾಗಿದೆ.
ಸಿಸಿಬಿಯ ಈ ಮೆಗಾ ಕಾರ್ಯಾಚರಣೆ ವೇಳೆ, ಭಾರೀ ಪ್ರಮಾಣದಲ್ಲಿ ಡ್ರಗ್ಸ್ ಪತ್ತೆಯಾಗಿದೆ ಎನ್ಬಲಾಗಿದ್ದು ಹತ್ತಾರು ಮಂದಿ ಯುವತಿಯರು ಸೇರಿದಂತೆ ಅನೇಕರನ್ಬು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ರೇವ್ ಪಾರ್ಟಿ ಅಕ್ರಮದಲ್ಲಿ ಪ್ರತಿಷ್ಠಿತರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು ಈ ಬಗ್ಗೆ ತನಿಖೆಯನ್ನು ಬಿರುಸುಗೊಳಿಇಸದ್ದಾರೆ.