ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪಕ್ಕೆ ಗುರಿಯಾಗಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಿರಾಳರಾಗಿದ್ದಾರೆ.
ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಶಾಸಕ ಹರೀಶ್ ಪೂಂಜ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಈ ನಡುವೆ, ಪೊಲೀಸರು ನೋಟಿಸ್ ನೀಡಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ಅವರು ಬುಧವಾರ ರಾತ್ರಿ ಪೊಲೀಸ್ ಠಾಣೆಗೆ ಹಾಜರಾದರು.
ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹರೀಶ್ ಪೂಂಜ ಅವರನ್ನು ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.