ಬೆಂಗಳೂರು: ಮೇಲ್ಮನೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರು ಐವರು ನಾಯಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಕಣಕ್ಕಿಳಿದ ಶಿವಮೊಗ್ಗದ ಎಸ್.ಪಿ.ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದ ಫರ್ಡಿನಾಂಡ್ ಲಾರೆನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ ಚಿಕ್ಕಮಗಳೂರಿನ ಬಿ.ಆರ್.ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ ಮತ್ತು ಬ್ಯಾಟರಾಯನಪುರದ ವಿನೋದ್ ಶಿವರಾಜ್ ಅವರನ್ನು ಮುಂದಿನ ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.







































































