ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿ ದುರಂತಕ್ಕೆ, ಘಟನೆಗೆ ಗೇಮಿಂಗ್ ವಲಯದ ಮಾಲೀಕರ ನಿರ್ಲಕ್ಷ್ಯ ಕಾರಣವಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಮರ್ಪಕ ನಿಯಮ ಪಾಲಿಸದ ಹಿನ್ನೆಲೆ ಗೇಮ್ ಝೋನ್‌ನ ಮಾಲೀಕ ಹಾಗೂ ಮ್ಯಾನೇಜರ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ.