ಬೆಂಗಳೂರು; ಈ ತಿಂಗಳಾಂತ್ಯದಿಂದ ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಲಿದ್ದು, ಜೂನ್ 5ರ ಸುಮಾರಿಗೆ ಮಳೆ ಆರಂಭವಾಗಲಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಆಗಲಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ಉತ್ತಮ ಪರಿಣಾಮ ಬೀರಲಿದೆ ಎಂದಿದೆ.
ಇದೇ ವೇಳೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮನಾ ಇಲಾಖೆ ಮುನ್ಸೂಚನೆ ನೀಡಿದೆ.





















































