ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪೊಲೀಸರೆದುರು ಹಾಜರಾಗಿ ಹೇಳಿಕೆ ನೀಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಬಮವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸಂಸದ ಪ್ರಜ್ವಲ್ ರೇವಣ್ಣ ಅವರು ತಲೆಮರೆಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಜ್ವಲ್ ರೇವಣ್ಣ ಅವರು ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಪ್ರಕರಣದಲ್ಲಿ ಸ್ಪಷ್ಟ ಹೇಳಿಕೆ ನೀಡಬೇಕು. ನಮ್ಮ ಪಕ್ಷದ ಆಗ್ರಹವೂ ಆಗಿದೆ ಎಂದರು.























































