ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಸಾವಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪ್ಸರಕರಣದ ಹಿನ್ನೆಲೆಯಲ್ಲಿ ಎಂ; ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ. ಇದಕ್ಕೆ ನೇರವಾಗಿ ಸರ್ಕಾರವೇ ಕಾರಣ. 187 ಕೋಟಿ ಲೂಟಿ ಹೊಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಹಿಂದೆ ಕೆ.ಎಸ್.ಈಶ್ವರಪ್ಪನವರ ರಾಜೀನಾಮೆ ಕೇಳಿದ ಕಾಂಗ್ರೆಸ್ ಸಚಿವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಅಶೋಕ್ ಎಚ್ಚರಿಸಿದರು.
























































