ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (KMVSTDC) ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಾಗಿದೆ. KMVSTDC ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಕಾರಣ ಎಂದು ಹೇಳಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಇದರ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
























































