ನವದೆಹಲಿ: ಎಲ್ಪಿಜಿ ಸಿಲಿಂಡರ್ಗಳ ಬೆಲೆ ಮತ್ತೆ ಅಗ್ಗವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಚುನಾವಣೆ ಸಂದರ್ಭದಲ್ಲಿ ಸತತ ಮೂರನೇ ಬಾರಿಗೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಸಿವೆ.
ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 69.5 ರೂ. ಕಡಿತಗೊಳಿಸಿದ್ದು ಬಳಕೆದಾರರು ಮತ್ತಷ್ಟು ಸಂತುಷ್ಟರಾಗಿದ್ದಾರೆ.







































































