ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ನಾಪಮತ್ರ ಸಲ್ಲಿಸಲು ಜೂನ್ 03 ಕೊನೆ ದಿನವಾಗಿದ್ದು ಅದಕ್ಕೆ ಮುನ್ನಾ ದಿನವಾದ ಭಾನುವಾರ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ವಿಧಾನಸಭೆಯ ಒಟ್ಟು ಸದಸ್ಯಬಲಕ್ಕೆ ಅನುಗುಣವಾಗಿ, ಪ್ರಸಕ್ತ ನಡೆಯುತ್ತಿರುವ 11 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂವರು ಅಭ್ಯರ್ಥಿಗಳನ್ನು ಹೈಕಮಾಂಡ್ ಘೋಷಿಸಿದೆ.
ಮಾಜಿ ಸಚಿವ ಸಿ.ಟಿ ರವಿ, ಹಾಲಿ ಶಾಸಕ ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಟಿಕೆಟ್ ಪ್ರಕಟಿಸಲಾಗಿದೆ ಎಂದು ಬಿಜೆಪಿ ಮಾಹಿತಿ ಹಂಚಿಕೊಂಡಿದೆ.














































































