ಹಾಸನ: ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠಿತ ಅಖಾಡವೆನಿಸಿರುವ ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.
ಮಾಜಿ ಪ್ರಧಾನಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಎರಡು ದಶಕಗಳ ಬಳಿಕ ಕಾಂಗ್ರೆಸ್ ಗೆದ್ದಿದೆ. ಮರು ಆಯ್ಕೆ ಬಯಸಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಪೆನ್ ಡ್ರೈವ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಅದಾಗಲೇ ಫಲಿತಾಂಶ ಪ್ರಕಟವಾಗಿದೆ.
ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಜ್ವಲ್ ವಿರುದ್ಧ ಕಣಕ್ಕಿಳಿದಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. .






















































