ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ಗೆ 11 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ 7 ಮಂದಿ, ಬಿಜೆಪಿಯಿಂದ ಮೂವರು, ಜೆಡಿಎಸ್‌ನಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಸಲಹೆಗಾರ ಕೆ.ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಬಿಲ್ಕಿಸ್ ಬಾನೊ, ಐವನ್ ಡಿಸೋಜಾ ಹಾಗೂ ಜಗದೇವ್ ಗುತ್ತೇದಾರ್ ಅವರು ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿ ಅಭ್ಯರ್ಥಿಗಳಾಗಿ ಮಾಜಿ ಸಚಿವ ಸಿ ಟಿ ರವಿ, ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತು ಎಂ ಜಿ ಮುಳೆ ಉಮೇದುವಾರಿಕೆ ಸಲ್ಲಿಸಿದ್ದರು. ಜೆಡಿಎಸ್ ಹುರಿಯಾಳಾಗಿ ಟಿ.ಎನ್.ಜವರಾಯಿ ಗೌಡ ಕಣಕ್ಕಿಳಿದಿದ್ದರು. ಈ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಿಸಿದ್ದಾರೆ.

























































