ಬೆಂಗಳೂರು: ಬಿಜೆಪಿ ಬಗೆಗಿನ ಮಾನಹಾನಿ ನಡೆ ಕುರಿತ ಮಾನಹಾನಿ ಪ್ರಕರಣದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಸರ್ಕಾರ ಎಂದು ಅಪಪ್ರಚಾರ ಮಾಡಿದ್ದ ಆರೋಪ ಕಾಂಗ್ರೆಸ್ ನಾಯಕರ ಮೇಲಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಾ ಆರೋಪಿಗಳಾಗಿದ್ದು, ಅವರು ನ್ಯಾಯಾಲಯದಲ್ಲಿ ಕಳೆದ ವಿಚಾರಣೆ ಸಂದರ್ಭದಲ್ಲಿ ಹಾಜರಾಗಿ ಜಾಮೀನು ಪಡೆದಿದ್ದರು. ಆದರೆ, ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಕಡ್ಡಾಯವಾಗಿ ಹಾಜರಾಗಬೇಕೆಂದು ನ್ಯಾಯಾಲಯ ಆದೇಶಿಸಿತ್ತು.
ಇಂದು ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಯವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಶ್ಯೂರಿಟಿ ಸಲ್ಲಿಸಿದ್ದಾರೆ.






















































