ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ವಾಲ್ಮಿಕಿ ನಿಗಮ ಹಗರಣದಲ್ಲಿ ಶಾಸಕ ಬಸನಗೌಡ ದದ್ದಲ್ ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಈ ನಾಯಕರ ರಾಜೀನಾಮೆ ಪಡೆದು ವಾಲ್ಮಿಕಿ ಸಮುದಾಯಕ್ಕೆ ನ್ಯಾಯಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಆಗ್ರಹಿಸಿದೆ.
ವಾಲ್ಮಿಕಿ ನಿಗಮದ ಹಗರಣವು ಬಗೆದಷ್ಟು ಭಯಾನಕವಾಗಿದೆ ಎಂದಿರುವ ಬಿಜೆಪಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ನಾಡಿನ ವಾಲ್ಮೀಕಿ ಸಮುದಾಯಕ್ಕೆ ಮಾಡಿರುವ ಮಹಾಮೋಸ ಎಂದು ಬಣ್ಣಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, 187 ಕೋಟಿ ರೂಪಾಯಿ ಅವ್ಯವಹಾರದಲ್ಲಿ ಕೇವಲ ಸಚಿವ ನಾಗೇಂದ್ರ ಮಾತ್ರವಲ್ಲ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರದ್ದೂ ಸಹ ಪಾತ್ರವಿದೆ ಎಂದು ದೂರಿದೆ.
ಬಗೆದಷ್ಟು ಭಯಾನಕವಾಗಿದೆ @INCKarnataka ಸರ್ಕಾರ ನಾಡಿನ ವಾಲ್ಮೀಕಿ ಸಮುದಾಯಕ್ಕೆ ಮಾಡಿರುವ ಮಹಾಮೋಸ!!.
ಒಟ್ಟು ₹187 ಕೋಟಿ ಅವ್ಯವಹಾರದಲ್ಲಿ ಕೇವಲ ಸಚಿವ @BNagendraINC ಮಾತ್ರವಲ್ಲ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಸಚಿವ @S_PrakashPatil ಅವರದ್ದೂ ಸಹ ಪಾತ್ರವಿದೆ.
ಸಿಎಂ @siddaramaiah ಅವರೇ, ಕೂಡಲೇ… pic.twitter.com/zLkV0wksiS
— BJP Karnataka (@BJP4Karnataka) June 8, 2024
ಸಿಎಂ ಸಿದ್ದರಾಮಯ್ಯ ಅವರೇ, ಕೂಡಲೇ ಶಾಸಕ ಬಸನಗೌಡ ದದ್ದಲ್ ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆದು ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ನೀಡಿ ಎಂದು ಬಿಜೆಪಿ ಒತ್ತಾಯಿಸಿದೆ.