ನವದೆಹಲಿ; ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಅವರು ದಿವಂಗತ ಮಾಜಿ ಪ್ರಧಾನಿ ವಾಜಪೇಯಿ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.
ಬೆಳಿಗ್ಗೆ ದೆಹಲಿಯ ರಾಜಘಾಟ್‌ಗೆ ತೆರಳಿದ ನರೇಂದ್ರ ಮೋದಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಗೌರವ ವಂದನೆ ಸಲ್ಲಿಸಿದರು.
ಇದೇ ವೇಳೆ, ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.
ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೂ ಭೇಟಿ ನೀಡಿದ ಮೋದಿ, ಮೂರು ಸೇನಾಪಡೆಗಳು ಮುಖ್ಯಸ್ಥರ ಉಪಸ್ಥಿತಿಯಲ್ಲಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.
#WATCH | Delhi: PM-designate Narendra Modi reaches the National War Memorial, ahead of his swearing-in ceremony, to be held today at Rashtrapati Bhawan.
He will take oath as the Prime Minister for the third consecutive term, today at 7:15 PM. pic.twitter.com/qMzPK1Bnw3
— ANI (@ANI) June 9, 2024