ನವದೆಹಲಿ; ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಆಡಳಿತಾರೂಢ ಭಾರತೀಯ ಜನತಾ ಪಕ್ಷದಲ್ಲಿ ವಿದ್ಯಮಾನಗಳು ಬಿರುಸುಗೊಂಡಿವೆ. ಮೋದಿ ಸಂಪುಟದಲ್ಲಿ ಸಚಿವರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಲಿದ್ದಾರೆ.
ಮೋದಿ 3ನೇ ಅವಧಿಯ ಸರ್ಕಾರ ಭಾನುವಾರ ರಚನೆಯಾಗಿದ್ದು, ಸಂಪುಟ ದರ್ಜೆ ಸಚಿವರಾಗಿ ಜೆ.ಪಿ. ನಡ್ಡಾಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅವರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಈ ನಡುವೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಹಿಮಾಚಲ ಪ್ರದೇಶದ ನಾಯಕ ಅನುರಾಗ್ ಠಾಕೂರ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಹರಿದಾಡುತ್ತಿವೆ. ಈ ಕಾರಣಕ್ಕಾಗಿಯೇ ಅನುರಾಗ್ ಠಾಕೂರ್‌ಗೆ ಸಚಿವ ಸ್ಥಾನ ನೀಡಲಾಗಿಲ್ಲ ಎನ್ನಲಾಗುತ್ತಿದೆ.