ಬೆಂಗಳೂರು: ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಇದೀಗ ಸಿನಿಲೋಕದ ಕುತೂಹಲದ ಕೇಂದ್ರಬಿಂದು. ‘ಕಲ್ಕಿ 2898 ಎಡಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಜನ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಟ್ರೇಲರ್ ಬಗ್ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಸಹಿತ ಅನೇಕ ದಿಗ್ಗಜ ಕಲಾವಿದರು ನಟಿಸಿದ್ದರಿಂದ ಬಾಲಿವುಡ್ ಲೋಕದಲ್ಲೂ ಈ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನ್ ದತ್ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ಭೈರವ ಪಾತ್ರದಲ್ಲಿ ನಟ ಪ್ರಭಾಸ್ ಕಾಣಿಸಿಕೊಂಡಿದ್ದಾರೆ.





















































