ಮುಂಬೈ: ‘ದಿ ಟ್ರಯಲ್‘ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ನಟಿಸಿದ್ದ ಮಾಲಾಬಿಕಾ ದಾಸ್ ನಿಗೂಢವಾಗಿ ಸಾವನ್ನಪ್ಪಿದ್ದು ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ.
31 ವರ್ಷದ ನೂರ್ ಮಾಲಾಬಿಕಾ ದಾಸ್ ಮಾಜಿ ಗಗನಸಖಿಯೂ ಹೌದು. ನಟಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮುಂಬೈನಲ್ಲಿರುವ ಆಕೆಯ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಪಾರ್ಟ್ಮೆಂಟ್ನಲ್ಲಿ ದುರ್ವಾಸನೆ ಬರುತ್ತಿದ್ದ ಬಗ್ಗೆ ನೆರೆಹೊರೆಯವರು ನೀಡಿದ ಮಾಹಿತಿ ಆಧಾರದಲ್ಲಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ನಟಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆಯಾದರೂ ತನಿಖೆಯ ನಂತರ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2023ರಲ್ಲಿ ಬಿಡುಗಡೆಗೊಂಡಿದ್ದ ‘ದಿ ಟ್ರಯಲ್‘ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು.