ನವದೆಹಲಿ: ಸಾಮಾಜಿಕ ಮಾಧ್ಯಮಗಳಿಂದ ‘ಮೋದಿ ಕಾ ಪರಿವಾರ್’ ಟ್ಯಾಗ್ ತೆಗೆದುಹಾಕುವಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.
ಪ್ರಧಾನಿ ಮೋದಿಗೆ ಕುಟುಂಬವೇ ಇಲ್ಲ ಎಂದು RJD ನಾಯಕ ಲಾಲು ಪ್ರಸಾದ್ ಯಾದವ್ ಟೀಕಿಸಿದ್ದರು. ಇದರಿಂದ ಕುಪಿತರಾಗಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿನ ತಮ್ಮ ಖಾತೆಗಳಲ್ಲಿ ‘ಮೋದಿ ಕಾ ಪರಿವಾರ್’ ಎಂಬ ಟ್ಯಾಗ್ ಹಾಕಿ ಮೋದಿಯವರನ್ನು ಬೆಂಬಲಿಸಿದ್ದರು.
ಇದೀಗ ಚುನಾವಣೆಯಲ್ಲಿ ಗೆದ್ದು ಮೂರನೇ ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಮಂಗಳವಾರ ಹೇಳಿಕೆ ನೀಡಿ, ‘ಮೋದಿ ಕಾ ಪರಿವಾರ್’ ಅಭಿಯಾನ ಮೂಲಕ ತಮ್ಮನ್ನು ಬೆಂಬಲಿಸಿದವರಿಗೆ ಧನವಾದ ಹೇಳಿದ್ದಾರೆ. ಇನ್ನು ಮುಂದೆ ಈ ಘೋಷವನ್ನು ತೆಗೆಬಹುದು ಎಂದು ಟ್ವೀಟ್ ಮಾಡಿದ್ದಾರೆ.