ಹುಬ್ಬಳ್ಳಿ: ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಸುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ ಪಾಟೀಲ್, ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ಗೆ ರಾಜಮರ್ಯಾದೆ ನೀಡುತ್ತಿಲ್ಲ. ಗಂಭೀರ ಆರೋಪ ಎದುರಿಸುತ್ತಿರುವ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದರು.
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕಾರದಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು. ಇದರ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದವರು ಸ್ಪಷ್ಟಪಡಿಸಿದರು.
























































