ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ಸಹೋದರಿ ಪ್ರಿಯಾಂಕಾ ವಾದ್ರಾ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ವಯನಾಡ್ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿರುವ ರಾಹುಲ್ ಗಾಂಧಿ ಒಂದು ಕ್ಷೇತ್ರವನ್ನು ತೆರವುಗೊಳಿಸಿಬೇಕಿದೆ. ಹಾಗಾಗಿ ತಮ್ಮ ಕುಟುಂಬ ಬಹುಕಾಲದಿಂದ ಪ್ರತಿನಿಧಿಸುತ್ತಿರುವ ರಾಯಬರೇಲಿ ಕ್ಷೇತ್ರವನ್ನು ರಾಹುಲ್ ಉಳಿಸಿಕೊಳ್ಳಲಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ರಾಯಬರೇಲಿ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದು, ವಯನಾಡ್ ಕ್ಷೇತ್ರದ ಉಪಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.