ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿದೆ.
ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಡಿಯೊ ಕಾನ್ಫರೆನ್ಸ್ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.