ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ ಅವರಿಗೆ ದೆಹಲಿಯ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿತ್ತಾದರೂ ಅವರು ಸೆರೆವಾಸದಿಂದ ಮುಕ್ತವಾಗುವ ಮೊದಲೇ ದೆಹಲಿ ಹೈಕೋರ್ಟ್ ಕೆಲ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ಕೇಜ್ರಿವಾಲ್ ನಿರಾಳವಾಗಿದ್ದರು. ಈ ಜಾಮೀನು ಆದೇಶವನ್ನು ಜಾರಿ ನಿರ್ದೇಶನಾಲಯವು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಜಾರಿ ನಿರ್ದೇಶನಾಲಯದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ಅ ಅವರ ಜಮೀನನ್ನು ತಡೆಹಿಡಿದಿದೆ.
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಅರವಿಂದ್ ಕೇಜ್ರಿವಾಲ್‌ಗೆ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲೆಂದು ಸುಪ್ರೀಂ ಕೋರ್ಟ್ ಮೇ 10 ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಅವಧಿ ಮುಗಿದ ಬಳಿಕ, ಜೂನ್ 2 ರಂದು ಅವರು ಕೋರ್ಟ್‌ಗೆ ಶರಣಾಗಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ ಅವರಿಗೆ ದೆಹಲಿಯ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿತ್ತಾದರೂ ಅವರು ಸೆರೆವಾಸದಿಂದ ಮುಕ್ತವಾಗುವ ಮೊದಲೇ ದೆಹಲಿ ಹೈಕೋರ್ಟ್ ಕೆಲ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.





















































